ಲೋಕಸಭಾ ಸಚಿವಾಲಯದ ಹೌಸ್ ಕೀಪಿಂಗ್ ಸಿಬ್ಬಂದಿಗೆ ಕೊರೋನಾ ಸೋಂಕು

Promotion

ನವದೆಹಲಿ, ಏಪ್ರಿಲ್ 21, 2020 (www.justkannada.in): ಲೋಕಸಭಾ ಸಚಿವಾಲಯದಲ್ಲಿ ಕೆಲಸ ಮಾಡುವ ಹೌಸ್ ಕೀಪಿಂಗ್ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋಂಕಿತ ವ್ಯಕ್ತಿ ಕಳೆದ ಕೆಲ ದಿನಗಳಿಂದ ಜ್ವರ, ಶೀತ, ಕಫ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಕೆಲಸಕ್ಕೆ ಬಂದಿರಲಿಲ್ಲ. ಜ್ವರ ಕಡಿಮೆಯಾಗದಿದ್ದ ಕಾರಣ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿತು.

ಸೋಂಕಿತ ವ್ಯಕ್ತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ವಿಶೇಷ ಘಟಕದಲ್ಲಿ ದಾಖಲಾಗಿದ್ದಾರೆ. ಸಿಬ್ಬಂದಿಯ ಕುಟುಂಬದ 11 ಮಂದಿ ಸದಸ್ಯರ ರಕ್ತದ ಮಾದರಿಯನ್ನು ಕೊರೋನಾ ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಬರಬೇಕಿದೆ ಎಂದು ತಿಳಿದು ಬಂದಿದೆ.