ಸುಪ್ರೀಂಕೋರ್ಟ್’ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊರೊನಾ ಸೋಂಕು

ಬೆಂಗಳೂರು, ಜನವರಿ 09, 2021 (www.justkannada.in): ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ಸುಪ್ರೀಂಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಪೈಕಿ ಓರ್ವ ನ್ಯಾಯಮೂರ್ತಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಇನ್ನುಳಿದ ಮೂವರು ನ್ಯಾಯಾಧೀಶರು ಹೋಮ್ ಕ್ವಾರಂಟೈನ್‌ ಆಗಿದ್ದಾರೆ.

ಜನವರಿ 10ರಿಂದ ಸುಪ್ರೀಂ ಕೋರ್ಟ್​ನ ವಿಚಾರಣೆಗಳು ವಿಡಿಯೋ ಕಾನ್ಫೆರನ್ಸ್ ಮೂಲಕ ನಡೆಯಲಿದ್ದು, ಈ ಅವಧಿಯಲ್ಲಿ ತುರ್ತಾಗಿ ನಡೆಸಬೇಕಾದ ಪ್ರಕರಣಗಳ ವಿಚಾರಣೆಗಳನ್ನ ಮಾತ್ರ ಕೈಗೆತ್ತಿಕೊಳ್ಳಲಾಗುತ್ತೆ ಎಂದು ಉಚ್ಛ ನ್ಯಾಯಾಲಯ ತಿಳಿಸಿದೆ.