ಕೊರೊನಾ ಮೀಟರ್: ದೇಶದಲ್ಲಿ 2.34 ಲಕ್ಷ ಹೊಸ ಕೋವಿಡ್ ಪ್ರಕರಣಗಳು

Promotion

ಬೆಂಗಳೂರು, ಜನವರಿ 30, 2022 (www.justkannada.in): ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 2.34 ಲಕ್ಷ ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದೇ ವೇಳೆ 893 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ದೈನಂದಿನ ಪಾಸಿಟಿವಿಟಿ ದರವು ಶೇಕಡಾ 13.39 ರಿಂದ ಶೇಕಡಾ 14.50 ಕ್ಕೆ ಏರಿದೆ, ಆದರೆ ವಾರದ ಪಾಸಿಟಿವಿಟಿ ರೇಟ್ ಶೇಕಡಾ 16.40 ರಷ್ಟು ದಾಖಲಾಗಿದೆ.

ಕರ್ನಾಟಕದಲ್ಲಿ ಕೋವಿಡ್-19 ಸಂಬಂಧಿತ ಸಾವುಗಳು ಶುಕ್ರವಾರ 50 ರಿಂದ ಶನಿವಾರ 70 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.