ಕೊರೊನಾ ಮೀಟರ್: 39,097 ಜನರಿಗೆ ಸೋಂಕು ದೃಢ

Promotion

ಬೆಂಗಳೂರು, ಜುಲೈ 24, 2021 (www.justkannada.in): ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,097 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿವೆ.

ಕಳೆದ 24 ಗಂಟೆಯಲ್ಲಿ 546 ಜನರು ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,13,32,159ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,08,977 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 35,087 ಜನರು ಗುಣಮುಖರಾಗಿದ್ದಾರೆ. ಒಟ್ಟಾರೆ ದೇಶದಲ್ಲಿ ಈವರೆಗೆ 3,05,03,166 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಈವರೆಗೆ 42,78,82,261 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ನಿನ್ನೆ ದೇಶದಲ್ಲಿ 16,31,266 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ.