ಬಾವಲಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲಿಸಲಿರುವ ಸಚಿವ ಎಸ್.ಟಿ ಸೋಮಶೇಖರ್…

ಮೈಸೂರು,ಏಪ್ರಿಲ್,21,2021(www.justkannada.in): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ 2ನೇ ಅಲೆ ತಡೆಗಟ್ಟಲು ರಾಜ್ಯ ಸರ್ಕಾರ ಇಂದಿನಿಂದ ಪರಿಷ್ಕೃತ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದೆ. ಈ ಮೂಲಕ ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಆರಂಭವಾಗಲಿದೆ.jk

ಈ ಮಧ್ಯೆ ಮೈಸೂರು  ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆ ಇಂದು ಕೇರಳ ಗಡಿಭಾಗ ಬಾವಲಿ ಚೆಕ್ ಪೋಸ್ಟ್ ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲನೆ ನಡೆಸಲಿದ್ದಾರೆ.corona-Minister- ST Somashekhar- will – visit-bavali-check post.

ಈಗಾಗಲೇ ಕೇರಳ ಭಾಗದಿಂದ ಬರುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನ ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದ್ದು, ಭೇಟಿ ವೇಳೆ ಸಚಿವ ಎಸ್ ಟಿ ಸೋಮಶೇಖರ್ ತಪಾಸಣೆ ಪ್ರಕ್ರಿಯೆ ಸೇರಿದಂತೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.

Key words: corona-Minister- ST Somashekhar- will – visit-bavali-check post.