ಕೊರೋನಾ ಆತಂಕದಲ್ಲೂ ಕೆಲಸ ನಿರ್ವಹಿಸಿದ್ದ ಪತ್ರಕರ್ತರಿಗೆ ದಿನಸಿ ಕಿಟ್ ವಿತರಣೆ….

ಮೈಸೂರು,ಜು,25,2020(www.justkannada.in):  ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಸೋಂಕು ತಡೆಗಟ್ಟಲು ಕೊರೋನಾವಾರಿಯರ್ಸ್ ಆಗಿ ವೈದ್ಯರು ಪೊಲೀಸರು ನರ್ಸ್ ಗಳು ಆಶಾ ಕಾರ್ಯಕರ್ತೆಯರು ಕೆಲಸ ನಿರ್ವಹಿಸುತ್ತಿದ್ದಾರೆ. ಅಂತೆಯೇ ಪತ್ರಕರ್ತರೂ ಕೂಡ ಕೊರೋನಾ ಆತಂಕದ ನಡುವೆ ತಮ್ಮ ಜೀವದ ಹಂಗು ಕಾರ್ಯ ನಿರ್ವಹಿಸುತ್ತಿದ್ದಾರೆ.jk-logo-justkannada-logo

ಹೀಗಾಗಿ ಮೈಸೂರಿನಲ್ಲಿ ಪತ್ರಕರ್ತರಿಗೆ ಮೈಸೂರು ನಾಗರೀಕ ವೇದಿಕೆ ವತಿಯಿಂದ ದಿನಸಿ ಕಿಟ್ ವಿತರಣೆ ಮಾಡಲಾಯಿತು. ಮೈಸೂರು ಸುತ್ತೂರು ಶಾಖಾ ಮಠದ ಆವರಣದಲ್ಲಿ ಪತ್ರಕರ್ತರಿಗೆ ದಿನಸಿ ಕಿಟ್ ವಿತರಣೆ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಪತ್ರಕರ್ತರಿಗೆ ದಿನಸಿ ಕಿಟ್ ವಿತರಣೆ ಮಾಡಿದರು. ಮೈಸೂರು ಜಿಲ್ಲೆಯ ಎಲ್ಲಾ ಪತ್ರಕರ್ತರಿಗೂ ನಾಗರೀಕ ವೇದಿಕೆ ಕಿಟ್ ವಿತರಿಸುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸುತ್ತೂರು ಶ್ರೀಗಳು, ಕೊರೋನಾ ಆತಂಕದಲ್ಲೂ ಎಲ್ಲಾ ಕಡೆ ಓಡಾಡಿ ಪತ್ರಕರ್ತರು ಕೆಲಸ ಮಾಡಿದ್ದಾರೆ. ಕಂಟೈನ್ಮೆಂಟ್ ಜೋನ್, ಸೀಲ್ ಡೌನ್ ಪ್ರದೇಶವನ್ನೂ ಲೆಕ್ಕಿಸದೇ ಕೆಲಸ ಮಾಡಿದ್ದಾರೆ. ಜೀವದ ಹಂಗು ತೊರೆದು ಕಾರ್ಯನಿರ್ವಹಿಸಿದ್ದಾರೆ. ದಿನೇ ದಿನೇ ಕೊರೊನಾ ಸೋಂಕು ಕೂಡಾ ಹೆಚ್ಚಾಗುತ್ತಿದೆ. ಎಲ್ಲರೂ ಸಹ ಎಚ್ಚರಿಕೆ ವಹಿಸಬೇಕು, ಸಾರ್ವಜನಿಕರೂ ಕೂಡಾ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.corona-mysore-distributes-grocery-kit-journalists-work

ಕಾರ್ಯಕ್ರಮದಲ್ಲಿ ಜಿಲ್ಲಾಪತ್ರಕರ್ತರ ಸಂಘದ ಅಧ್ಯಕ್ಷರಾದ ಸಿ.ಕೆ.ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬಾಬು ಹಿರಿಯ ಪತ್ರಕರ್ತರು ಉಪಸ್ಥಿತರಿದ್ದರು.

Key words: Corona –mysore-distributes – Grocery -Kit -journalists –work