ಕೊರೋನಾ ಸಮಯದಲ್ಲಿ ಪರೀಕ್ಷೆಗಳು ಬೇಡ: ಮೈಸೂರು ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ…..

ಮೈಸೂರು,ಜು,27,2020(www.justkannada.in):  ಕೊರೋನಾ ಸಂದರ್ಭದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿ ಹಾಗೂ ಪರೀಕ್ಷೆ ಪುನರಾರಂಭ ಹಿನ್ನೆಲೆ, ಮೈಸೂರು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಇಂತಹ ಪರಿಸ್ಥಿತಿಯಲ್ಲಿ ಪರೀಕ್ಷೆಗಳು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.jk-logo-justkannada-logo

ಕ್ರಾಫಡ್ ಹಾಲ್ ಮುಂದೆ ನಾಮಫಲಕಗಳನ್ನ ಮೈಸೂರು ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹರಡುತ್ತಿರುವ ಹಿನ್ನೆಲೆ ಇಂತಹ ಪರಿಸ್ಥಿತಿಯಲ್ಲಿ ಪರೀಕ್ಷೆಗಳು ಬೇಡ. ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ, ಉನ್ನತ ಶಿಕ್ಷಣ ಸಚಿವರಿಗೆ ಹಾಗೂ ವಿವಿ ಉಪಕುಲಪತಿಗೆ ಪತ್ರ ಬರೆಯಲಾಗಿದೆ. ಆಗಸ್ಟ್ ಹಾಗೂ ಸೆಪ್ಟೆಂಬರ್ ನಲ್ಲಿ ತರಗತಿ ಹಾಗೂ ಪರೀಕ್ಷೆ ನಡೆಸಲು ನಿರ್ಧರಿಸಿರುವ ಸರ್ಕಾರದ ಕ್ರಮ ಸರಿಯಲ್ಲ ಸರ್ಕಾರ ಹಾಗೂ ವಿವಿ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ತರಗತಿ ಪುನಾರಂಭ ಕುರಿತು ಉಪಕುಲಪತಿಗಳ ಜೊತೆ ನೆನ್ನೆ ನಡೆದ ಆನ್‌ಲೈನ್ ಚರ್ಚೆಯು ವಿದ್ಯಾರ್ಥಿ ಸಮುದಾಯಕ್ಕೆ ತೃಪ್ತಿ ತಂದಿಲ್ಲ. ಆಗಸ್ಟ್ 12 ರವರೆಗೆ ಅಂತರಾಜ್ಯ ಹಾಗೂ ಸ್ಥಳೀಯ ರೈಲ್ವೆ ಸಂಚಾರ ಸ್ಥಗಿತವಾಗಿರುವ ಹಿನ್ನೆಲೆ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಗೆ ಬರಲು ತೊಂದರೆಯಾಗುತ್ತದೆ ಎಂದು ಕಿಡಿಕಾರಿದರು. corona-no-exam-protest-students-mysore-university

.ಹಾಗೆಯೇ ಆರೋಗ್ಯ ಕುರಿತು ಕಳವಳ ವ್ಯಕ್ತಪಡಿಸಿದ ವಿವಿ ವಿದ್ಯಾರ್ಥಿಗಳು,  ಚರ್ಚೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆ ಕುರಿತು ಯಾವುದೇ ಚರ್ಚೆಯಾಗಿಲ್ಲ. ಇನ್ನು ವಿದ್ಯಾರ್ಥಿ ನಿಲಯದಲ್ಲಿ  ಶೌಚಾಲಯಗಳ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಆರೋಗ್ಯಕರ ಮತ್ತು ಶುಚಿಯಾದ ಆಹಾರ ಪೂರೈಕೆ ಬಹುದೊಡ್ಡ ಸವಾಲಾಗಿದೆ. ಕೋವಿಡ್ 19 ಪರೀಕ್ಷಾ ವಿಧಾನವು ಸಂಪೂರ್ಣವಾಗಿ ಖಾತರಿಯಾಗಿಲ್ಲ ಮತ್ತು ಹೆಚ್ಚಿನ ಪ್ರಕರಣಗಳು ಲಕ್ಷಣರಹಿತವಾಗಿವೆ. ಮೊದಲಿಗೆ ನಕಾರಾತ್ಮಕ ವರದಿ ಬಂದು ನಂತರ ಸೋಂಕು ಕಂಡು ಬಂದರೆ ಅದು ಹರಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸರ್ಕಾರ ಹಾಗೂ ವಿವಿ ತೆಗೆದುಕೊಂಡಿರುವ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Key words: Corona-No exam-  Protest – students –Mysore university