ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕೊರೋನಾ ಪಾಸಿಟಿವ್ ದೃಢ.

Promotion

ನವದೆಹಲಿ,ಡಿಸೆಂಬರ್,28,2021(www.justkannada.in): ಮಾಜಿ ಕ್ರಿಕೆಟ್ ಆಟಗಾರ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಕೊರೋನಾ ಸೋಂಕು ತಗುಲಿದೆ. ಕೋಲ್ಕತ್ತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ  ಸೌರವ್ ಗಂಗೂಲಿ ಅವರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚೆಗಷ್ಟೆ ಸೌರವ್ ಗಂಗೂಲಿ ಅವರ ಹಿರಿಯ ಸಹೋದರ ಮತ್ತು ಬೆಂಗಾಲ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಸ್ನೇಹಾಶೀಷ್ ಗಂಗೂಲಿಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿತ್ತು. ಗಂಗೂಲಿ ಅವರಿಗೆ ಕೋವಿಡ್ ವೈರಸ್‌ ನ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ವರದಿ ಬಂದಿದ್ದು ವರದಿ ಪಾಸಿಟಿವ್ ಕಂಡುಬಂದಿದೆ.

Key words: Corona- positive – BCCI-president -Sourav Ganguly