ಕೊರೋನಾ ಹಿನ್ನೆಲೆ: ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ‌ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ.

ಮೈಸೂರು,ಏಪ್ರಿಲ್,16,2021(www.justkannada.in):  ಕೋವಿಡ್-19 ಎರಡನೇ ಅಲೆ ಹೆಚ್ಚ‍ಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ  15 -04- 2021ರಿಂದ 15 -05- 2021ರ ವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.corona-restriction-public-access-srikantheshwara-temple-nanjangud

ಮೈಸೂರು ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಾಲಯದ ಆಡಳಿತ ಮಂಡಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ.  ಇಂದಿನಿಂದ ಮೇ 15 ವರೆಗೆ ದೇವಾಲಯಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧವಿರಲಿದೆ.corona-restriction-public-access-srikantheshwara-temple-nanjangud

ಜತೆಗೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಆದೇಶ ಪಾಲಿಸುವಂತೆ ಮನವಿ ಮಾಡಲಾಗಿದ್ದು, ಕೊರೊನಾ ಹರಡುವಿಕೆ ತಡೆಗಟ್ಟುವ ದೃಷ್ಟಿಯಿಂದ ದೇವಾಲಯ ಬಂದ್ ಮಾಡಲಾಗಿದೆ. ಈ ಮೂಲಕ ಮುಂದಿನ ಆದೇಶವರೆಗೂ ಶ್ರೀಕಂಠೇಶ್ವರನ ದರ್ಶನ ಭಾಗ್ಯ ಭಕ್ತರಿಗಿಲ್ಲ.

Key words: Corona- Restriction – public access – Srikantheshwara temple – Nanjangud.