ಕೊರೋನಾಗೆ ಮೈಸೂರಿನಲ್ಲಿ ಮತ್ತೊಂದು ಬಲಿ…

Promotion

ಮೈಸೂರು,ಜು,7,2020(www.justkannada.in):  ಮಲ್ಲಿಗೆ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ  ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ನಡುವೆ ಇಂದು ಕೊರೋನಾ ವೈರಸ್ ಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ.

ಕೆ.ಆರ್.ನಗರ ತಾಲ್ಲೂಕಿನ ಹೊಸೂರು ಗ್ರಾಮದ 75 ವರ್ಷದ ವೃದ್ಧೆ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ವೃದ್ಧೆಗೆ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವೃದ್ಧೆ ಚಿಕಿತ್ಸೆ ಫಲಕಾರಿ ಆಗದೆ ಕೋವಿಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಇಂದು ಜಿಲ್ಲಾಡಳಿತ ಅಧಿಕೃತ ಘೋಷಣೆ  ಮಾಡುವ ಸಾಧ್ಯತೆ ಇದೆ.corona-virus-death-mysore-hospital

ವೃದ್ಧೆ ಸಾವಿನ ಮೂಲಕ ಮೈಸೂರು ಜಿಲ್ಲೆಯಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.  ಕೆ ಆರ್ ನಗರ ತಾಲೂಕಿನಲ್ಲೇ 4 ಜನ ಕೊರೋನಾದಿಂದ ಮೃತಪಟ್ಟಿದ್ದು ಈ ಬೆಳವಣಿಗೆಯಿಂದ ಕೆ ಆರ್ ನಗರದ ಜನ ಬೆಚ್ಚಿ ಬಿದ್ದಿದ್ದಾರೆ.

Key words: corona-virus-death- mysore-hospital