ಸಿಎಂ ಬಿಎಸ್ ವೈ ನಿವಾಸಕ್ಕೆ ಆಗಮಿಸಿವವರೆಲ್ಲರಿಗೂ ವೈದ್ಯರಿಂದ ಸ್ಕ್ರೀನಿಂಗ್…

Promotion

ಬೆಂಗಳೂರು,ಮಾ,16,2020(www.justkannada.in):  ಕೊರೋನಾ ವೈರಸ್ ಭೀತಿ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸುವ ಎಲ್ಲರಿಗೂ ವೈದ್ಯರು ತಪಾಸಣೆ ನಡೆಸಿ ಒಳಗೆ ಬಿಡುತ್ತಿದ್ದಾರೆ.

ಕೊರೋನಾ ಸೋಂಕು ಹರಡುವ ಆತಂಕ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭೇಟಿಗೆ ಮಾರ್ಗಸೂಚಿ ಜಾರಿಗೊಳಿಸಲಾಗಿದೆ.ಸಿಎಂ ನಿವಾಸದ ಎದುರು ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದು ಕೊರೋನಾ ತಪಾಸಣೆ ನಂತರ ಸಿಎಂ ನಿವಾಸಕ್ಕೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತಿದೆ.

ಬೆಂಗಳೂರು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಸಿಎಂ ಬಿಎಸ್ ವೈ ಅವರನ್ನ ಭೇಟಿ ಮಾಡಲು ರಾಜ್ಯದ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಾರೆ. ಹೀಗಾಗಿ ಸಿಎಂ ಬಿಎಸ್ ವೈ ನಿವಾಸದ ಬಳಿ ತಪಾಸಣೆ ಮಾಡಿ ಒಳಬಿಡಲಾಗುತ್ತಿದೆ. ಇದಕ್ಕಾಗಿ  ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಇದ್ದು ಸಿಎಂ ಬಿಎಸ್ ಯಡಿಯೂರಪ್ಪ  ಭೇಟಿಗೆ ಬರುವ ಪ್ರತಿಯೊಬ್ಬರನ್ನು ತಪಾಸಣೆ ನಡೆಸಿ ಬಳಿಕ ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ.

Key words: corona virus- effect-doctor – Inspection-CM BS yeddyurappa-residence.