ರಾಜ್ಯದಲ್ಲಿ ಇಂದು ಹೊಸದಾಗಿ 9,860 ಮಂದಿಗೆ ಕೊರೋನಾ ಸೋಂಕು ದೃಢ…

Promotion

ಬೆಂಗಳೂರು,ಸೆಪ್ಟಂಬರ್,2,2020(www.justkannada.in):  ರಾಜ್ಯದಲ್ಲಿ   ಇಂದು ಒಂದೇ ದಿನ 9,860 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.jk-logo-justkannada-logo

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3,61,341 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೋನಾದಿಂದ 113 ಮಂದಿ ಮೃತಪಟ್ಟಿದ್ದು,  ಈವರೆಗೆ  5,950  ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.  ಇಂದು 6287 ಜನ ಬಿಡುಗಡೆಯಾಗಿದ್ದು, ಇದುವರೆಗೆ 2,60,913 ಜನ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ರಾಜ್ಯದಲ್ಲಿ  94,459 ಕೊರೋನಾ ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.corona-virus-infects-9860-new-people-state-today

ಬೆಂಗಳೂರಿನಲ್ಲಿ ಇಂದು 3420 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿನಿಂದ  32 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಬೆಂಗಳೂರಿನಲ್ಲಿ 2037 ಮಂದಿ ಸೋಂಕಿತರು ಬಲಿಯಾಗಿದ್ದಾರೆ.

Key words: Corona virus- infects -9,860 new people – state -today.