ಕೊರೋನಾ ಭೀತಿ ಹಿನ್ನೆಲೆ: ಸ್ಕ್ರೀನಿಂಗ್ ವಿಚಾರದಲ್ಲಿ ಮತ್ತಷ್ಟು ಕಠಿಣ ಕ್ರಮ- ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿಕೆ…

ಬೆಂಗಳೂರು,ಮಾ,17,2020(www.justkannada.in): ರಾಜ್ಯದಲ್ಲಿ ಕೊರೋನಾ ಭೀತಿ ಹೆಚ್ಚಾದ ಹಿನ್ನೆಲೆ, ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ವಿಮಾನನಿಲ್ದಾಣದಲ್ಲಿ ಸ್ಕ್ರೀನಿಂಗ್  ವಿಚಾರದಲ್ಲಿ  ಮತ್ತಷ್ಟು ಕಠಿಣ ಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ತಿಳಿಸಿದ್ದಾರೆ.

 ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಇಂದು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೊರೋನ ಹರಡುವ ಭೀತಿ ಹಿನ್ನೆಲೆ ವೈದ್ಯರು ಈಗಾಗಲೇ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ವಿದೇಶದಿಂದ ಬರುವ ಎಲ್ಲರನ್ನು ತಪಾಸಣೆ ನಡೆಸಲಾಗುತ್ತಿದೆ. ಈಗಾಗಲೇ 8 ವಿದೇಶಿಗರನ್ನು ಪ್ರತ್ಯೇಕ ಮಾಡಿ ತಪಾಸಣೆ ನಡೆಸಲಾಗುತ್ತಿದೆ. ಒಂದು ವೇಳೆ ಕೊರೊನಾ ಸೋಂಕು ಲಕ್ಷಣ ಕಂಡುಬಂದಿಲ್ಲಿ ಅಂತಹವರನ್ನು ಎ, ಬಿ, ಸಿ ಕೆಟಗರಿ ಮಾಡಿ ಮೂರು ಕೆಟಗರಿಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಹಾಗೆಯೇ . ಸ್ಕ್ರೀನಿಂಗ್ ವಿಚಾರದಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಸೋಂಕಿತರನ್ನ ಮನೆಯಲ್ಲಿ ತಪಾಸಣೆ ಮಾಡುವ ಬದಲು ವಿಮಾನ ನಿಲ್ದಾಣದಲ್ಲಿಯೇ ತಪಾಸಣೆ ಮಾಡಲು ತೀರ್ಮಾನಿಸಲಾಗಿದೆ. ವಿಮಾನನಿಲ್ದಾಣದ ಬಳಿಯಿರುವ ರೆಸ್ಟೋರೆಂಟ್, ಹೊಟೇಲ್ ಗಳಲ್ಲಿ ಚಿಕಿತ್ಸೆ ನೀಡಲು ಪ್ಲ್ಯಾನ್ ಮಾಡಿದ್ದೇವೆ ಎಂದು ಸಚಿವ ಸುಧಾಕರ್ ತಿಳಿಸಿದರು.

Key words: Corona virus-stringent -action – screening-  Medical Education- Minister- Dr. Sudhakar