ಕೊರೋನಾ ವೈರಸ್ ಮುನ್ನೆಚ್ಚರಿಕೆ: ಮೋದಿ ಬ್ರುಸೆಲ್ಸ್ ಪ್ರವಾಸ ರದ್ದು

Promotion

ನವದೆಹಲಿ, ಮಾರ್ಚ್ 7, 2020 (www.juskannada.in): ಕೊರೋನಾ ವೈರಸ್ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬ್ರುಸೆಲ್ಸ್ ಪ್ರವಾಸವನ್ನು ರದ್ದು ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಕೊರೋನಾ ವೈರಸ್ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಎರಡೂ ರಾಷ್ಟ್ರಗಳೂ ಪ್ರವಾಸಗಳನ್ನು ಕೈಗೊಳ್ಳದಂತೆ ನಿರ್ಧಾರ ಕೈಗೊಂಡಿವೆ.

ಹೀಗಾಗಿ ಮೋದಿಯವರ ಬ್ರುಸೆಲ್ಸ್ ಪ್ರವಾಸವನ್ನು ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ, ಅಲ್ಲದೆ, ಭಾರತ-ಐರೋಪ್ಯ ಒಕ್ಕೂಟ ಶೃಂಗದ ದಿನಾಂಕವನ್ನು ಬದಲಿಸಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿದ್ದು ಈ ಸೋಂಕಿಗೆ ಹಲವರು ಬಲಿಯಾಗುತ್ತಿದ್ದಾರೆ.