ಕೊರೊನಾ ಹೆಚ್ಚಳ ಹಿನ್ನೆಲೆ, ವಿಧಾನಸೌಧ, ವಿಕಾಸಸೌಧಕ್ಕೆ ಪ್ರವೇಶ ನಿರ್ಬಂಧ

Promotion

ಬೆಂಗಳೂರು,ಏಪ್ರಿಲ್,18,2021(www.justkannada.in) : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸಾರ್ವಜನಿಕ ಪ್ರವೇಶವನ್ನ ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.jkಸರ್ಕಾರ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ವಿಧಾನಸೌಧದಲ್ಲಿನ ಮುಖ್ಯಮಂತ್ರಿಯವರ ಸಚಿವಾಲಯ, ಸಚಿವ ಮತ್ತು ಸಚಿವಾಲಯದ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಿದ ಭೇಟಿ ಹೊರತುಪಡಿಸಿ ಸಾಮಾನ್ಯ ಭೇಟಿಗೆ ಸಾರ್ವಜನಿಕರ ಪ್ರವೇಶವನ್ನ ನಿರ್ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಸಚಿವಾಲಯದ ಸಿಬ್ಬಂದಿ, ಅಧಿಕಾರಿ ಮತ್ತು ಸಾರ್ವಜನಿಕರ ಆರೋಗ್ಯ ಹಾಗೂ ಆಡಳಿತದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದು, ಭೇಟಿಗೆ ಪೂರ್ವಾನುಮತಿ ಪತ್ರವನ್ನ ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು. ಇನ್ನು ಮಧ್ಯಾಹ್ನ 3.30ರ ಬಳಿಕವೇ ಈ ಭೇಟಿಗೆ ಅವಕಾಶ ನೀಡಬೇಕು ಎಂದು ಸರ್ಕಾರ ತಿಳಿಸಿದೆ.

key words : Corona-Increase-Background-Method-evolution-soups-Access-Restriction