“ಕೊರೊನಾ ನಿಯಮ ಉಲ್ಲಂಘಿಸಿದ್ರೆ ಸಭೆಗಳ ಆಯೋಜಕರಿಗೆ 10 ಸಾವಿರ ರೂ. ದಂಡ” : ಸಚಿವ ಡಾ.ಕೆ.ಸುಧಾಕರ್

Promotion

ಬೆಂಗಳೂರು,ಮಾರ್ಚ್,25,2021(www.justkannada.in) : ಸಭೆ-ಸಮಾರಂಭಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ, ಮಾಲ್, ಹೋಟೆಲುಗಳಲ್ಲಿ ನಿಯಮಿತ ಜನಸಂದಣಿ, ಸಾಮಾಜಿಕ ಅಂತರ ನಿಯಮಗಳು ಉಲ್ಲಂಘನೆಯಾದಲ್ಲಿ ಹವಾ ನಿಯಂತ್ರಿತವಲ್ಲದ ಸಭಾಂಗಣ, ಸ್ಥಳಗಳ ಮಾಲೀಕರಿಗೆ 5ಸಾವಿರ ರೂ. ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೋಟೆಲ್ ಹಾಗೂ ಸಾರ್ವಜನಿಕ ಸಭೆಗಳ ಆಯೋಜಕರಿಗೆ 10ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ನೂತನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ಬಿಬಿಎಂಪಿ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 250 ಹಾಗೂ ಇತರೆ ಪ್ರದೇಶಗಳಲ್ಲಿ 100 ದಂಡ ವಿಧಿಸಲಾಗುವುದು ಎಂದಿದ್ದಾರೆ.

Corona-rule -violation-organizers-meetings-paid 10 Thousand-Penalties-Minister-Dr.K.Sudhakar

key words : Corona-rule -violation-organizers-meetings-paid 10 Thousand-Penalties-Minister-Dr.K.Sudhakar