ಕೊರೊನಾ ಸ್ಥಿತಿಗತಿ ಕುರಿತು ರಾಜ್ಯಪಾಲರಿಗೆ ಮಾಹಿತಿ 

Promotion

ಬೆಂಗಳೂರು,ಏಪ್ರಿಲ್,18,2021(www.justkannada.in) : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು  ಭೇಟಿ ಮಾಡಿ ರಾಜ್ಯದಲ್ಲಿ ಉಂಟಾಗಿರುವ ಕೊರೊನಾ ಸ್ಥಿತಿಗತಿ ಕುರಿತಂತೆ ಮಾಹಿತಿ ನೀಡಿದರು.

jk

ರಾಜ್ಯಪಾಲರಿಗೆ ಕೋವಿಡ್ ನಿಯಂತ್ರಣ ಸಂಬಂಸಿದಂತೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತಾಗಿ ಪ್ರತಿಯೊಂದು ಮಾಹಿತಿಯನ್ನು ಒದಗಿಸಿದರು.

ಸರ್ಕಾರಿ, ಖಾಸಗಿ ಆಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳು, ಖಾಸಗಿ ವೈದ್ಯಕೀಯ ಕಾಲೇಜುಗಳು, ಕೋವಿಡ್ ಕೇಂದ್ರಗಳಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆ ಐಸಿಯುನಲ್ಲಿ ದಾಖಲಾಗಿರುವುದು, ಲಭ್ಯವಿರುವ ಹಾಸಿಗೆ, ಲಸಿಕೆ, ವೆಂಟಿಲೇಟರ್, ಆಕ್ಸಿಜನ್, ಆಯಂಬುಲೆನ್ಸ್ ಸೇರಿದಂತೆ ಮತ್ತಿತರ ವಿವರಗಳ ಕುರಿತು ವಿವರಿಸಿದರು.

ಮೇ ತಿಂಗಳ ಮಧ್ಯಭಾಗದಲ್ಲಿ ಹೆಚ್ಚಿನ ಸೋಂಕು ಬರಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಏಪ್ರಿಲ್ ತಿಂಗಳ ಮೊದಲ ವಾರದಿಂದಲೇ ನಮ್ಮ ನಿರೀಕ್ಷೆಗೂ ಮೀರಿದ ಸೋಂಕಿನ ಪ್ರಕರಣಗಳು ದಾಖಲಾಗುತ್ತಿವೆ. ಆದರೂ, ಸರ್ಕಾರ ಸೋಂಕು ಹರಡುವುದನ್ನು ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಬೆಂಗಳೂರು ಸೇರಿದಂತೆ 8  ಜಿಲ್ಲೆಗಳಲ್ಲಿ ಕೊರೊನಾ ಕಫ್ರ್ಯೂ ವಿಸ್ತರಿಸಲಾಗಿದೆ. ನಾಲ್ಕೈದು ಜಿಲ್ಲೆಗಳಲ್ಲಿ ಪರಿಸ್ಥಿತಿ ವಿಷಮವಾಗಿದ್ದನ್ನು, ಹೊರತುಪಡಿಸಿದರೆ ಬಹುತೇಕ ಕಡೆ ಸಹಜ ಸ್ಥಿತಿಯಲ್ಲಿದೆ. ಪ್ರತಿಯೊಬ್ಬರಿಗೂ ಉತ್ತಮವಾದ ಆರೋಗ್ಯ ಸೇವೆಯನ್ನು ಒದಗಿಸಲು ಸರ್ಕಾರ ಶಕ್ತಿ ಮೀರಿ ದುಡಿಯುತ್ತಿದೆ. ಏಕಾಏಕಿ ಸೋಂಕಿನ ಪ್ರಕರಣಗಳು ಹೆಚ್ಚಾಗಿದ್ದರಿಂದ ಕೆಲವು ಕಡೆ ಹಾಸಿಗೆಗಳ ಕೊರತೆ ಎದುರಾಗಿದೆ ಎಂದು ತಿಳಿಸಿದರು.

ಮಾಹಿತಿ ಪಡೆದ ರಾಜ್ಯಪಾಲರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಇನ್ನಷ್ಟು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪಿ.ರವಿಕುಮಾರ್ ಅವರಿಗೆ ಸೂಚನೆ ಕೊಟ್ಟಿದ್ದಾರೆ.

key words : Corona-Status-About-governor-Information