Promotion
ನವದೆಹಲಿ, ಆ,3,2020(www.justkannada.in): ಭಾರತದಲ್ಲಿ ಕೊರೋನ ಪಾಸಿಟಿವ್ ಪ್ರಕರಣ ದಿನೇ ದಿನೇ ಹೆಚ್ಚುತ್ತಿದ್ದು ಈ ನಡುವೆ ಕೊರೋನಾ ಸೋಂಕಿತರ ಸಂಖ್ಯೆ 18 ಲಕ್ಷ ಗಡಿ ದಾಟಿದೆ.
ದೇಶದಲ್ಲಿ ಒಂದೇ ದಿನ 52,972 ಮಂದಿಗೆ ಕೊರೊನಾ ವೈರಸ್ ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 18,03,696ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 771 ಜನರು ಕೊರೊನಾ ಸೋಂಕಿನಿಂದ ಬಲಿಯಾಗಿದ್ದು, ಈ ಮೂಲಕ ಕೊರೋನಾಗೆ ಮೃತಪಟ್ಟವರ ಸಂಖ್ಯೆ 38,135ಕ್ಕೆ ಏರಿಕೆಯಾಗಿದೆ.
ಇನ್ನು18,03,696 ಸೋಂಕಿತರ ಪೈಕಿ 11, 86,203 ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5,79,357 ಕೊರೋನಾ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಅತಿ ಹೆಚ್ಚು ಕೊವಿಡ್ ಸಾವು ಹೊಂದಿರುವ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ.
Key words: coronavirus – 18 lakh -borders – country.