ಕೊರೊನಾ ವೈರಸ್ ಅಟ್ಟಹಾಸ: ಮಹಾರಾಷ್ಟ್ರದಲ್ಲಿ ಒಂದೇ ದಿನ 32 ಮಂದಿ ಬಲಿ

ಮುಂಬೈ, ಏಪ್ರಿಲ್ 30, 2020 (www.justkannada.in): ಒಂದೇ ದಿನ ಮಹಾರಾಷ್ಟ್ರದಲ್ಲಿ 32 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಬಲಿಯಾದವರ ಸಂಖ್ಯೆ 1,080 ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಬುಧವಾರ ಭಾರತದಲ್ಲಿ ಒಟ್ಟು 1,635 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 33,045 ಕ್ಕೆ ಏರಿಕೆಯಾಗಿದೆ. ಈ ಪೈಕಿ 8 ಸಾವಿರಕ್ಕಿಂತ ಅಧಿಕ ರೋಗಿಗಳು ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಸತತ 2 ನೇ ದಿನ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹೊಸ ಸೋಂಕು ಪ್ರಕರಣಗಳ ಸಂಖ್ಯೆ ಮಂಗಳವಾರ 729 ಇದ್ದದ್ದು, ಬುಧವಾರ 597 ಕ್ಕೆ ಇಳಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,915 ಕ್ಕೆ ಏರಿಕೆಯಾಗಿದೆ.