ನಾಗಮಂಗಲ ಶಾಸಕ ಸುರೇಶಗೌಡಗೂ ಕೊರೊನಾ ಸೋಂಕು ದೃಢ

Promotion

ನಾಗಮಂಗಲ, ಆಗಸ್ಟ್ 02, 2020 (www.justkannada.in): ಶಾಸಕ ಸುರೇಶ್ ಗೌಡ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.

ತಲೆನೋವು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಟಲು ದ್ರವವನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಭಾನುವಾರ ಪರೀಕ್ಷೆಯ ವರದಿ ಬಂದಿದ್ದು ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ.

ಶಾಸಕರ ಕಾರು ಚಾಲಕನಿಗೆ ಸಹ ಸೋಂಕು ದೃಢ ಪಟ್ಟಿದೆ.  ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು ,ಚಿಕಿತ್ಸೆ ‌ಪಡೆಯುತ್ತಿದ್ದಾರೆ.

ಶಾಸಕರ ಪತ್ನಿ ಮತ್ತು ಮಕ್ಕಳು ಬೆಂಗಳೂರಿನ ಮನೆಯಲ್ಲಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಅಲ್ಲದೇ ಶಾಸಕರ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.