ಕೊರೋನಾ ವೈರಸ್ ಭೀತಿ ಹಿನ್ನೆಲೆ: ಪ್ರಧಾನಿ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ…

Promotion

ನವದೆಹಲಿ,ಮಾ,4,2020(www.justkannada.in):  ವಿಶ್ವದಾದ್ಯಂತ ಮರಣಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಭೀತಿ ದೇಶದಲ್ಲೂ ಹೆಚ್ಚಾಗಿದ್ದು ಈ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ವೈರಸ್ ಬಗ್ಗೆ ಚರ್ಚಿಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ವೈರಸ್ ಭೀತಿ ಬಗ್ಗೆ ಚರ್ಚಿಸಲಾಗುತ್ತದೆ. ಬಳಿಕ 12 ಗಂಟೆಗೆ ಕೇಂದ್ರ ಆರೋಗ್ಯ ಸಚಿವರು ಸುದ್ದಿಗೋಷ್ಠಿ ನಡೆಸಿ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ.

ಕೊರೋನಾ ವೈರಸ್ ಭೀತಿ ಹಿನ್ನೆಲೆ ನಿನ್ನೆ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಕೊರೋನಾ ವೈರಸ್ ಬಗ್ಗೆ ಯಾವುದೇ ಆತಂಕ ಬೇಡ ಎಂದು ದೇಶದ ಜನತೆಗೆ ಧೈರ್ಯ ಹೇಳಿದ್ದರು.

Key words: coronavirus –horror-Discussion – Cabinet meeting – Prime Minister -Modi.