ಕೊರೋನಾ ವೈರಸ್ ಭೀತಿ ಹಿನ್ನೆಲೆ: ವಸತಿ ಶಾಲೆಗಳ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ನೀಡುವಂತೆ ಸುತ್ತೋಲೆ…

ಬೆಂಗಳೂರು,ಮಾ,14,2020(www.justkannada.in): ಕೊರೋನಾ ವೈರಸ್ ಭೀತಿ ಹಿನ್ನೆಲೆ: ವಸತಿ ಶಾಲೆಗಳ 1ರಿಂದ 5ನೇ ತರಗತಿವರೆಗಿನ ಪರೀಕ್ಷೆಗಳನ್ನು ರದ್ದುಗೊಳಿಸಿ  ಬೇಸಿಗೆ ರಜೆ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ  ಸುತ್ತೋಲೆ ಹೊರಡಿಸಿದೆ.

ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ 1ರಿಂದ 5ನೇ ತರಗತಿವರೆಗಿನ ಪರೀಕ್ಷೆಗಳನ್ನು ರದ್ದುಗೊಳಿಸಿ ಬೇಸಿಗೆ ರಜೆ ಘೋಷಿಸಬೇಕು. 2019-20ನೇ ಸಾಲಿನ ಯೂನಿಟ್ ಟೆಸ್ಟ್ ಗಳ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

ಬೇಸಿಗೆ ರಜೆ ನಂತರ  2020-21ನೇ ಸಾಲಿನ ವೇಳಾಪಟ್ಟಿಯಂತೆ ಶಾಲೆಗಳ ಪುನರಾರಂಭ ಮಾಡಬೇಕು. ಇನ್ನು 7ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾರ್ಚ್ 23ರವರೆಗೆ ವಿದ್ಯಾರ್ಥಿನಿಲಯಗಳಲ್ಲಿ ವಾಸ್ತವ್ಯಕ್ಕೆ ಅವಕಾಶ ನೀಡಿ  ಪರೀಕ್ಷೆಯ ನಂತರ ಶೀಘ್ರವೇ ತಮ್ಮ ತಮ್ಮ ಮನೆಗೆ ವಿದ್ಯಾರ್ಥಿಗಳನ್ನು ಕಳುಹಿಸಲು ಕ್ರಮ ಕೈಗೊಳ್ಳಬೇಕು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿನಿಲಯಗಳಲ್ಲಿ ವಾಸ್ತವ್ಯಕ್ಕೆ ಅನುವು ಮಾಡಿಕೊಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

Key words: coronavirus –horror-summer –holiday-students – residential schools.