ರಾಜ್ಯದಲ್ಲಿ ಇಂದು 5041 ಜನರಿಗೆ ಕೊರೋನಾ ಸೋಂಕು.

Promotion

ಬೆಂಗಳೂರು,ಜೂನ್,15,2021(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು ಇಂದು ಒಂದೇ ದಿನ 5041 ಮಂದಿಗೆ ಕೋರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದ್ದ ಕೋವಿಡ್ 2ನೇ ಅಲೆ ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿತ್ತು. ಕೋರೋನಾ ಪ್ರಕರಣ ಇಳಿಕೆಯಾದ ಕಾರಣ 19 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗಿದ್ದು ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್  ಮುಂದುವರೆಸಲಾಗಿದೆ.

ಇನ್ನು ರಾಜ್ಯದಲ್ಲಿಂದು 5041 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, 115 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 10 ತಿಂಗಳ ಬಳಿಕ ಕೊರೋನಾ ಸೋಂಕು 1000ಕ್ಕೆ ಇಳಿದಿದೆ. ಇಂದು ಬೆಂಗಳೂರಿನಲ್ಲಿ 1000 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ರೇಟ್ 3.8 .

Key words: Coronavirus- infects -5041 people – state -today.