ದೇಶದಲ್ಲಿ 40 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ…

ನವದೆಹಲಿ,ಸೆಪ್ಟಂಬರ್,5,2020(www.justkannada.in): ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 86,432 ಮಂದಿಗೆ ಕೊರೋನಾ ಸೋಂಕು ತಗುಲಿದೆ.jk-logo-justkannada-logo

ಅನ್ ಲಾಕ್ 4.0 ದೇಶದಲ್ಲಿ ಜಾರಿಯಲ್ಲಿದ್ದು ಶಾಲಾ ಕಾಲೇಜುಗಳು ಸಿನಿಮಾ ಥಿಯೇಟರ್  ಬಿಟ್ಟು ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆ  ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ದೇಶದಲ್ಲಿ ಸೋಂಕಿತರ ಸಂಖ್ಯೆ 40 ಲಕ್ಷ ಗಡಿ ದಾಟಿದೆ.coronavirus-number-crossing-40-lakh-borders-country

ಕಳೆದ 24 ಗಂಟೆಯಲ್ಲಿ 86,432 ಕೋವಿಡ್  ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 40,23,179ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.ಕೊರೋನಾದಿಂದಾಗಿ  ಒಂದೇ ದಿನ 1,089 ಜನ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 69,561ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ 31,07,223 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಸದ್ಯ 8,46,395 ಸಕ್ರಿಯ ಪ್ರಕರಣಗಳಿವೆ.

Key words: Coronavirus- number- crossing -40 lakh -borders – country.