ಕೊರೊನಾ ವೈರಸ್ ಭೀತಿ: ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಬಾರದಂತೆ ಮನವಿ

Promotion

ಬೆಂಗಳೂರು, ಮಾರ್ಚ್ 11, 2020 (www.juskannada.in): ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭಕ್ತರು ಆಗಮಿಸದಂತೆ ಮನವಿ ಮಾಡಿಕೊಳ್ಳಲಾಗಿದೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲವು ಪ್ರತಿ ತಿಂಗಳು ಪೂಜೆಗೆಂದು ತೆರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಕೊರೊನಾ ವೈರಸ್ ಹರಡುವ ಭೀತಿಯಿಂದ ಭಕ್ತರಿಗೆ ದೇವಸ್ಥಾನದ ಆಡಳಿತ ಮಂಡಳಿಯು ಸಂದೇಶವನ್ನು ರವಾನಿಸಿದೆ.

ಈ ಬಾರಿ ಅಯ್ಯಪ್ಪಸ್ವಾಮಿ ದೇವಸ್ಥಾನದ ಪೂಜೆಗೆ ಭಕ್ತರು ಆಗಮಿಸದಂತೆ ತಿರುವಾಂಕೂರ್ ದೇವಸ್ವಂ ಮಂಡಳಿಯ ಅಧ್ಯಕ್ಷ ಎನ್.ವಾಸು ತಿಳಿಸಿದ್ದಾರೆ. ಇದರ ಜೊತೆಗೆ ಯಾತ್ರಾರ್ಥಿಗಳು ಸಾರ್ವಜನಿಕವಾಗಿ ಹಬ್ಬ ಹರಿದಿನಗಳಲ್ಲಿ ಭಾಗವಹಿಸದಂತೆ ಮನವಿ ಮಾಡಿಕೊಂಡಿದ್ದಾರೆ.