ಭ್ರಷ್ಟಾಚಾರ ಆರೋಪ: ಮಾಜಿ ಸಿಎಂ ಬಿಎಸ್ ವೈ ಸೇರಿದಂತೆ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್.

ಬೆಂಗಳೂರು,ಆಗಸ್ಟ್,3,2021(www.justkannada.in):  ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ , ಬಿವೈ ವಿಜಯೇಂಧ್ರ ಸೇರಿದಂತೆ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ ನೀಡಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್​ಗೆ ಪೂರ್ವಾನುಮತಿ ಸಿಗದೇ ಇರುವುದರಿಂದ ಕೇಸ್ ವಜಾ ಆಗಿತ್ತು. ಆದರೆ, ಇದೀಗ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆದಿದ್ದು, ಮಾಜಿ ಸಿಎಂ ಬಿಎಸ್  ಯಡಿಯೂರಪ್ಪ ಸೇರಿದಂತೆ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ (Notice) ನೀಡಿದೆ.

ಬಿ.ಎಸ್.ಯಡಿಯೂರಪ್ಪ,  ಬಿ.ವೈ.ವಿಜಯೇಂದ್ರ,‌ ಶಶಿಧರ ಮರಡಿ, ಸಂಜಯ್​​ ಶ್ರೀ, ಚಂದ್ರಕಾಂತ ರಾಮಲಿಂಗಮ್, ಡಾ.ಜಿ.ಸಿ.ಪ್ರಕಾಶ್, ಎಸ್​​.ಟಿ.ಸೋಮಶೇಖರ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಯಡಿಯೂರಪ್ಪ ಈಗ ಮುಖ್ಯಮಂತ್ರಿ ಅಲ್ಲದೇ ಇರುವುದರಿಂದ ಪೂರ್ವಾನುಮತಿ ಅಗತ್ಯವಿಲ್ಲವೆಂದು ವಕೀಲರು ವಾದ ಮಂಡಿಸಿದ್ದಾರೆ. ಟಿ.ಜೆ.ಅಬ್ರಹಾಂ ಈ ವಿಚಾರವಾಗಿ ಅರ್ಜಿ ಸಲ್ಲಿಸಿದ್ದು, ಅವರ ಪರವಾದ ವಕೀಲರು ಹೀಗೆ ವಾದ ಮಂಡಿಸಿದ್ದಾರೆ. ಪೂರ್ವಾನುಮತಿ ಬಗ್ಗೆ ವಾದ ಆಲಿಸಬೇಕಾದ ಅಗತ್ಯ ಇರುವುದರಿಂದ ಹೈಕೋರ್ಟ್ ಏಕಸದಸ್ಯ ಪೀಠವು ಯಡಿಯೂರಪ್ಪ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣವನ್ನ ಸಿಬಿಐ ಅಥವಾ ಎಸ್ ಐಟಿ ತನಿಖೆಗೆ ವಹಿಸುವಂತೆ ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ  ನೀಡುವಂತೆ ಹೈಕೋರ್ಟ್ ನಲ್ಲಿ ಟಿ.ಜೆ ಅಬ್ರಹಂ ಅರ್ಜಿ ಸಲ್ಲಿಸಿದ್ದರು.

ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್​, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿತ್ತು. ಅದೇ ವೇಳೆ, ಅರ್ಜಿಯನ್ನು ಮಾರ್ಪಡಿಸಿ ಸಂಬಂಧಿಸಿದ ಪೀಠಕ್ಕೆ ವರ್ಗಾಯಿಸಲು ರಿಜಿಸ್ಟ್ರಾರ್ ಜನರಲ್‌ರಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ENGLISH SUMMARY….

Corruption charges: HC issues notices to former CM BSY and other defendants
Bengaluru, August 3, 2021 (www.justkannada.in): The Hon’ble High Court has issued notices to former Chief Minister B.S. Yediyurappa, B.Y. Vijendra, and other defendants, on corruption charges.
The case was dismissed as the prosecution had not received prior permission concerning the corruption charges against former CM BSY’s family. However, now hearing of the appeal concerning trial court orders has commenced, following which notices have been issued to the former CM and other defendants.
Notices have been issued to B.S. Yediyurappa, B.Y. Vijendra, Shashidhar Maradi, Sanjay Sri, Chandrakant Ramalingam, Dr. G.C. Prakash, S.T. Somashekar, K. Ravi and Virupakshappa Yamakanamaradi.
It can be recalled here that T.J. Abraham had recently appealed before the Hon’ble court seeking permission to lodge a PIL requesting to hand over the corruption charges against the former CM and his family members, to the CBI or SIT for investigation.
Keywords: Former CM BSY/ corruption charges/ HC notice/ issued

Key words: Corruption- High Court -notice –defendants- former CM BS yeddyurappa