ವಿಧಾನ ಪರಿಷತ್ ಚುನಾವಣೆ: ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ.

Promotion

ಬೆಳಗಾವಿ,ಜೂನ್,13,2022(www.justkannada.in): ವಿಧಾನ ಪರಿಷತ್ ನ  4 ಸ್ಥಾನಗಳಿಗೆ ಇಂದು ಚುನಾವಣಾ ಮತದಾನ ನಡೆಯುತ್ತಿದ್ದು, ಈ ಮಧ್ಯೆ ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.

ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ನಡುವೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಮತಗಟ್ಟೆಯಲ್ಲಿ ಬಿಜೆಪಿ ಶಾಸಕ ಅನಿಲ್ ಬೆನಕೆ ನೀತಿ ಸಂಹಿತೆ ಉಲ್ಲಂಘಿಸಿ ಮತಗಟ್ಟೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಅಲ್ಲದೆ ಮಾಸ್ಕ್ ಧರಿಸದೆ ಓಡಾಡಿದ ಹಿನ್ನೆಲೆ ಮತದಾರರು ಶಾಸಕ ಅನಿಲ್ ಬೆನಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕರು ಮತಗಟ್ಟೆಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದು, ಮತದಾರರ ಆಕ್ರೋಶಕ್ಕೆ ಕಾರಣವಗಿದೆ.

Key words: Council-election-BJP-mla- violated -Code of Conduct.