ದೇಶದ ಕೊರೊನಾ ಮೀಟರ್: 30,093 ಹೊಸ ಪ್ರಕರಣ ದೃಢ

ಬೆಂಗಳೂರು, ಜುಲೈ 20, 2021 (www.justkannada.in): ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 30,093 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಈ ಮೂಲಕ  ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿವೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,11,74,322 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 374 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳಲ್ಲಿ 45,254 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈ ಮೂಲಕ  ಗುಣಮುಖರಾದವರ ಸಂಖ್ಯೆ 3,03,53,710 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,06,130 ಸಕ್ರಿಯ ಪ್ರಕರಣಗಳಿವೆ.