ದೇಶದಲ್ಲಿ ಇಳಿಕೆ ಕಂಡ ಕೋವಿಡ್ ಪ್ರಕರಣ: ಒಂದೇ ದಿನದಲ್ಲಿ 28,591 ಸೋಂಕು.

Promotion

ನವದೆಹಲಿ,ಸೆಪ್ಟಂಬರ್,12,2021(www.justkannada.in): ಭಾರತದಲ್ಲಿ ಕೋವಿಡ್ ಪ್ರಕರಣ ಕಡಿಮೆಯಾಗಿದ್ದು, ಕಳೆದ 24ಗಂಟೆಗಳಲ್ಲಿ 28,591 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ  ಮಾಹಿತಿ ನೀಡಿದ್ದು, ಒಂದೇ ದಿನದಲ್ಲಿ  28,591 ನೂತನ ಕೋವಿಡ್ ಸೋಂಕು ಪತ್ತೆಯಾಗುವ ಮೂಲಕ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,32,36,921ಕ್ಕೆ ಏರಿಕೆಯಾಗಿದೆ.  ಕಳೆದ 24 ಗಂಟೆಗಳಲ್ಲಿ 338 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಈವರೆಗೆ ದೇಶಾದ್ಯಂತ ಸಾವನ್ನಪ್ಪಿರುವವರ ಸಂಖ್ಯೆ 4,42,655ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 34,848 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಚೇತರಿಸಿಕೊಂಡವರ ಪ್ರಮಾಣ 3,24,09,345ಕ್ಕೆ ಹೆಚ್ಚಳವಾಗಿದೆ. ಇನ್ನು ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3, 84,921 ಇದೆ.

Key words: Covid case -declines – country- 28,591 infections – single day