ರಾಜಕೀಯ ಬಿಕ್ಕಟ್ಟಿನ ನಡುವೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಕೋವಿಡ್ ಪಾಸಿಟಿವ್.

Promotion

ಮುಂಬೈ,ಜೂನ್,22,2022(www.justkannada.in):  ಶಿವಸೇನಾ ಶಾಸಕರ ಬಂಡಾಯದಿಂದಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು ಈ ಮಧ್ಯೆ  ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಈ ಕುರಿತು ಕಾಂಗ್ರೆಸ್ ಪಕ್ಷದ ಕಮಲ್ ನಾಥ್   ಮಾಹಿತಿ ನೀಡಿದ್ದಾರೆ. ಶಿವ ಸೇನೆ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕೋವಿಡ್ ಪಾಸಿಟಿವ್ ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ಕೇಂದ್ರ ಬಿಂದುವಾಗಿರುವ ಸಚಿವ ಏಕನಾಥ ಶಿಂಧೆ ತಮಗೆ 46 ಶಾಸಕರ ಬೆಂಬಲ ಇರುವುದಾಗಿ ಹೇಳಿಕೆ ನೀಡಿದ್ದಾರೆ. ಏಕನಾಥ ಶಿಂಧೆ ಶಾಸಕರ  ಜೊತೆ ಗುಜರಾತ್ ನ ಹೋಟಲ್ ವೊಂದರಲ್ಲಿ ವಾಸ್ತವ್ಯ ಹೂಡಿದ್ದರು.

ತಮ್ಮದೇ ಪಕ್ಷದ ಶಾಸಕರ ಬಂಡಾಯದಿಂದಾಗಿ ಸಿಎಂ ಉದ‍್ಧವ್ ಠಾಕ್ರೆಗೆ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು ಈ ಸಂಬಂಧ  ವೀಡಿಯೋ ಕಾನ್ಫರೆನ್ಸ್ ಮೂಲಕ ಕ್ಯಾಬಿನೆಟ್ ಸಭೆ ನಡೆಸುತ್ತಿದ್ದಾರೆ.

Key words: covid positive -Maharashtra CM- Uddhav Thackeray