ಕೋವಿಡ್ ನಿಯಮ ಉಲ್ಲಂಘನೆ ಆರೋಪ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 300ಕ್ಕೂ ಹೆಚ್ಚು ಜನರ ವಿರುದ್ದ ಕೇಸ್ ದಾಖಲು.

kannada t-shirts

ಬೆಳಗಾವಿ,ಆಗಸ್ಟ್,21,2021(www.justkannada.in):  ಜೈಲಿನಿಂದ  ಬಿಡುಗಡೆಗೊಂಡು ಹೊರಬಂದ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ  ಕೋವಿಡ್ ನಿಯಮ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಜಿ.ಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ 9 ತಿಂಗಳಿಂದ ಜೈಲುವಾಸ ಅನುಭವಿಸುತ್ತಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು  ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದು, ಈ ವೇಳೆ ಬೆಂಬಲಿಗರ ಜತೆ ಸೇರಿ ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ  ವಿನಯ್ ಕುಲಕರ್ಣಿ ಸೇರಿದಂತೆ 300 ಕ್ಕೂ ಹೆಚ್ಚು ಜನರ ವಿರುದ್ಧ ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್ ನಿಂದ ಜಾಮೀನು ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಇಂದು ವಿನಯ್ ಕುಲಕರ್ಣಿ ಅವರು ಹಿಂಡಲಗಾ ಜೈಲಿನಿಂದ ಬಿಡುಗಡೆಯಾದರು. ಹಿಂಡಲಗಾ ಜೈಲಿನ ಬಳಿ ಮೂರು ಸಾವಿರಕ್ಕೂ ಹೆಚ್ಚು ಬೆಂಬಲಿಗರು ನೆರೆದಿದ್ದು, ಕೋವಿಡ್ ನಿಯಮ, ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ತಮ್ಮ ನಾಯಕನ ಭರ್ಜರಿ ಮೆರವಣಿಗೆ ಮಾಡಿದ್ದರು. ಮೆರವಣಿಗೆ ವೇಳೆ ಮಾಸ್ಕ್,  ಸಾಮಾಜಿಕ ಅಂತರ ಮಾಯವಾಗಿತ್ತು.

Key words: Covid – rule- violation – Case -former minister- Vinay Kulkarni.

website developers in mysore