ರಾಜ್ಯ ಸರ್ಕಾರದಿಂದ ಅನ್ ಲಾಕ್ ಮಾರ್ಗಸೂಚಿ ಪ್ರಕಟ.

ಬೆಂಗಳೂರು,ಜೂನ್,11,2021(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅನ್ ಲಾಕ್ ಘೋಷಣೆ ಮಾಡಿದ್ದಾರೆ. ಜೂನ್ 14ರಿಂದ ಅನ್ ಲಾಕ್  ಜಾರಿಗೆ ಬರಲಿದೆ.jk

ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯಲಿದ್ದು 19 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗಿದ್ದು, ರಾಜ್ಯ ಸರ್ಕಾರ ಅನ್ ಲಾಕ್ ಗೆ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.  ಮಾರ್ಗಸೂಚಿ ಈ ಕೆಳಕಂಡಂತಿದೆ.

ಕೆಎಸ್ ಆರ್ ಟಿಸಿ, ಬಿಎಂಟಿಸಿ, ಖಾಸಗಿ ಬಸ್ ಸಂಚಾರಕ್ಕೆ ನಿರ್ಬಂಧ. ಆಟೋ ಟ್ಯಾಕ್ಸಿ ಸಂಚಾರಕ್ಕೆ ಅವಕಾಶ. ಇಬ್ಬರು ಪ್ರಯಾಣಿಕರು ಮಾತ್ರ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಇನ್ನು ಬೆಂಗಳೂರಿನಲ್ಲಿ ಮೆಟ್ರೋ ಸಂಚಾರವಿರುವುದಿಲ್ಲ.

ಮಧ್ಯಾಹ್ನ 2 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ದಿನಸಿ, ಹಾಲು, ತರಕಾರಿ, ಮಾಂಸ, ಮೀನು ಮಾರಾಟಕ್ಕೆ ಅವಕಾಶ ನೀಡಲಾಗಿದೆ.  ಮದುವೆಗಳಲ್ಲಿ 40 ಮಂದಿ ಅಂತ್ಯಕ್ರಿಯೆಗೆ 5 ಮಂದಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಶೇ.50ರಷ್ಟು ಸಿಬ್ಬಂದಿಯೊಂದಿಗೆ ಎಲ್ಲಾ ಕೈಗಾರಿಕೆಗಳು ತೆರೆಯಬಹುದಾಗಿದೆ. ಗಾರ್ಮೆಂಟ್ಸ್ ಶೇ.30ರಷ್ಟು ಸಿಬ್ಬಂದಿ ಬಳಸಿಕೊಳ್ಳಬೇಕು. ಸರ್ಕಾರಿ ಕಚೇರಿಗಳಲ್ಲಿ ಶೇ. 50 ರಷ್ಟು ಸಿಬ್ಬಂದಿ ಕಾರ್ಯ ನಿರ್ವಹಣೆ ಮಾಡಲು ಅವಕಾಶ.

ರಾಜ್ಯದಲ್ಲಿ ಸಂಜೆ 7ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ, ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.

Key words: covid – Unlock- Guidelines – State Government