ಮೇ 10ರಿಂದ ರಾಜ್ಯದ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ 18-44 ವಯೋಮಾನದವರಿಗೆ ಕೋವಿಡ್ ಲಸಿಕೆ

kannada t-shirts

ಬೆಂಗಳೂರು, ಮೇ 09, 2021 (www.justkannada.in): ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್‌ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಣೆ ಮಾಡಲಾಗುವುದು.

ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು.

ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ ಎಂದು ಹೇಳಿದ್ದಾರೆ.

website developers in mysore