ವಿಶ್ವಕಪ್ ಕ್ರಿಕೆಟ್: ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ

Promotion

ಬೆಂಗಳೂರು, ಅಕ್ಟೋಬರ್ 14, 2023 (www.justkannada.in): ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ.

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಪಂದ್ಯಕ್ಕಾಗಿ ಕೋಟ್ಯಂತರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ವಿಶ್ವದ ಅತಿ ದೊಡ್ಡ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದ ಟಿಕೆಟ್ ಕೂಡ ಸಂಪೂರ್ಣ ಸೋಲ್ಡ್ ಔಟ್ ಆಗಿದೆ. ಭಾರತ ಮತ್ತು ಪಾಕಿಸ್ತಾನ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ 8ನೇ ಬಾರಿಗೆ ಮುಖಾಮುಖಿಯಾಗಲಿವೆ. ಕಳೆದ 7 ಪಂದ್ಯಗಳಲ್ಲಿ ಭಾರತವೇ ಮೇಲುಗೈ ಸಾಧಿಸಿದೆ. ಅಂದರೆ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಒಂದೇ ಒಂದು ಪಂದ್ಯವನ್ನೂ ಗೆದ್ದಿಲ್ಲ.