ಫುಲ್ ಫಾರ್ಮ್’ನಲ್ಲಿರುವ ರೋಹಿತ್ ಶರ್ಮಾ ಹೊಸ ದಾಖಲೆ

Promotion

ಬೆಂಗಳೂರು, ಅಕ್ಟೋಬರ್ 24, 2019 (www.justkannada.in): ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಆಟವಾಡಿದ ರೋಹಿತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ.

ಹೌದು. ರೋಹಿತ್ ಶರ್ಮಾ ಎಲ್ಲ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಅಗ್ರ-10ರಲ್ಲಿ ಸ್ಥಾನ ಪಡೆದಿರುವ ಭಾರತದ ಮೂರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಐಸಿಸಿ ಟೆಸ್ಟ್ ಆಟಗಾರರ Rankingನಲ್ಲಿ 12 ಸ್ಥಾನ ಮೇಲಕ್ಕೇರಿ 10ನೇ ಸ್ಥಾನ ತಲುಪಿದ್ದಾರೆ. ಈ ಮೂಲಕ ನಾಯಕ ವಿರಾಟ್ ಕೊಹ್ಲಿ ಹಾಗೂ ನಿವೃತ್ತ ಆರಂಭಿಕ ಆಟಗಾರ ಗೌತಮ್ ಗಂಭೀರ್ ದಾಖಲೆಯನ್ನು ಮುರಿದಿದ್ದಾರೆ.

ರೋಹಿತ್ ಏಕದಿನ ಕ್ರಿಕೆಟ್ Rankingನಲ್ಲಿ 2018ರ ಫೆಬ್ರವರಿಯಲ್ಲಿ 2ನೇ ಸ್ಥಾನ ಪಡೆದಿದ್ದರು. 2018ರ ನವೆಂಬರ್‌ನಲ್ಲಿ ಟಿ-20 ಕ್ರಿಕೆಟ್‌ನಲ್ಲಿ ಏಳನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದರು.