ಮಾಸ್ಕ್ ಧರಿಸದಿದ್ದರೆ ಕ್ರಿಮಿನಲ್ ಕೇಸ್: ಬೆಂಗಳೂರು ನಗರ ಪೊಲೀಸ್ ಆಯುಕ್ತರ ವಾರ್ನಿಂಗ್

ಬೆಂಗಳೂರು, ಜೂನ್ 28, 2020 (www.justkannada.in): ನಾಗರಿಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ನಿನ್ನೆ ಒಂದೇ ದಿನ 596 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದೆ. ಸೋಂಕು ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಪೊಲೀಸ್ ಆಯುಕ್ತರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಕೆಲವೆಡೆ ನಿಮಯ ಉಲ್ಲಂಘನೆ ಮಾಡಲಾಗುತ್ತಿದ್ದು, ನಿಯಮ ಉಲ್ಲಂಘಿಸುವವರಿಗೆ ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಭಾಸ್ಕರ್ ರಾವ್ ಮುಂದೆ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ವಾರ್ನಿಂಗ್ ನೀಡಿದ್ದಾರೆ.