ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಇಬ್ಬರು ಜೆಡಿಎಸ್ ಶಾಸಕರನ್ನ ಅನರ್ಹಗೊಳಿಸುವಂತೆ ಸ್ಪೀಕರ್ ಗೆ ದೂರು.

ಬೆಂಗಳೂರು,ಜುಲೈ,8,2022(www.justkannada.in):  ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಇಬ್ಬರು ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಗೆ ದೂರು ನೀಡಲಾಗಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್ ಅಡ್ಡಮತದಾನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈ ಇಬ್ಬರ ಸದಸ್ಯತ್ವ ರದ್ದು ಮಾಡುವಂತೆ ಸ್ಪೀಕರ್ ಗೆ ಜೆಡಿಎಸ್ ದೂರು ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಜೆಡಿಎಸ್ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ, ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಶ್ರೀನಿವಾಸ್ ಗೌಡ ಹಾಗೂ ಎಸ್.ಆರ್ ಶ್ರೀನಿವಾಸ್ ವಿರುದ್ದ ದೂರು ನೀಡಿದ್ದೇವೆ. ಕಾಂಗ್ರೆಸ್ ನಾಯಕರ ಜತೆ ಗುರುತಿಸಿಕೊಂಡಿದ್ದಾರೆ. ಪಕ್ಷದ ಸಭೆಗೂ ಹಾಜರಾಗಿಲ್ಲ.   ಇದರಿಂದ 10ನೇ ಶೆಡ್ಯೂಲ್ ಉಲ್ಲಂಘನೆಯಾಗುತ್ತೆ. ಹೀಗಾಗಿ ಎಲ್ಲಾ ದಾಖಲೆ ಸಮೇತ ಸ್ಪೀಕರ್ ಗೆ ದೂರು ಕೊಟ್ಟಿದ್ದೇವೆ. ಕಾನೂನು ಪ್ರಕಾರ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ  ಸ್ಪೀಕರ್ ತಿಳಿಸಿದ್ದಾರೆ ಎಂದು ಹೇಳಿದರು.

Key words: Cross voting -Rajya Sabha –elections-Complaint – Speaker – disqualify – JDS MLA