ಚಂಡಮಾರುತ ಹಾನಿ: ಸೂಕ್ತ ಪರಿಹಾರ ಕಾರ್ಯಕ್ಕೆ ಸಿಎಂ ಯಡಿಯೂರಪ್ಪ ಸೂಚನೆ

Promotion

ಬೆಂಗಳೂರು, ಮೇ 16, 2021 (www.justkannada.in): ಚಂಡಮಾರುತದಿಂದಾಗಿ ಹಾನಿಗೊಳಗಾದ ಕರಾವಳಿ ಭಾಗದಲ್ಲಿ ಪರಿಹಾರ ಕಾರ್ಯಾಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಬಿಎಸ್ ವೈ ಸೂಚನೆ ನೀಡಿದ್ದಾರೆ.

ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಸಚಿವರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿರುವ ಸಿಎಂ, ಸೂಕ್ತ ಪರಿಹಾರ ಕಾರ್ಯ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಕೋವಿಡ್ ನಿಯಂತ್ರಣ ಕಾರ್ಯಗಳ ಜೊತೆಗೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ‌ ನೀಡಿ ಪರಿಹಾರ ಹಾಗು ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ನಿರ್ದೇಶನ ನೀಡಿದ್ದಾರೆ.

ಸರ್ಕಾರದಿಂದ ಯಾವುದೇ ತುರ್ತು ನೆರವು ಬೇಕಿದ್ದರೂ ಸಂಬಂಧಪಟ್ಟ ಸಚಿವರಿಗೆ ಅಥವಾ ತಮಗೆ ನೇರವಾಗಿ ಕರೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.