ಬೆಂಗಳೂರಿನಲ್ಲಿ ಮಸೀದಿಯಲ್ಲಿ ಸಿಲಿಂಡರ್ ಸ್ಪೋಟ.

Promotion

ಬೆಂಗಳೂರು,ಡಿಸೆಂಬರ್, 24,2021(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ಮಸೀದಿಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹೊತ್ತಿ ಉರಿದಿದೆ.

ಬೆಂಗಳೂರಿನ ಹೆಬ್ಬಾಳದಲ್ಲಿರುವ ಮಸೀದಿಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಅಡುಗೆ ಅನಿಲ ಸೋರಿಕೆಯಿಂದಾಗಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಇಂದು ಶುಕ್ರವಾರ ಹಿನ್ನೆಲೆಯಲ್ಲಿ ಜನರು ನಮಾಜ್ ಗೆ ಬಂದಿದ್ದರು. ಈ ವೇಳೆ ಮಸೀದಿಯಲ್ಲಿ ಸಿಲಿಂಡರ್ ಸ್ಪೋಟವಾಗಿದೆ.

ಸಿಲಿಂಡರ್ ಸ್ಪೋಟಗೊಳ್ಳುತ್ತಿದ್ದಂತೆ ಜನರು ಹೊರಗೆ ಓಡಿ ಬಂದಿದ್ದಾರೆ.  ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Cylinder -explosion – mosque -Bangalore