ರಾಜ್ಯದಲ್ಲಿ ಮೊದಲ ಕೋವಿಡ್ ಲಸಿಕೆ ಪಡೆದ ಡಿ ಗ್ರೂಪ್ ನೌಕರ…

kannada t-shirts

ಬೆಂಗಳೂರು,ಜನವರಿ,16,2021(www.justkannada.in) ಅತಿ ದೊಡ್ಡ ಲಸಿಕಾ ನೀಡಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.jk-logo-justkannada-mysore

ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆಯ ಡಿ ಗ್ರೂಪ್‌ ನೌಕರ ಚಂದ್ರಶೇಖರ್‌, ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದೇಶಾದ್ಯಂತ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ ಬಳಿಕ ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆಯ ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ ಅವರಿಗೆ ಲಸಿಕೆ ನೀಡಲಾಯಿತು.

D Group -employee - received - first -covid vaccine - state.
ಕೃಪೆ-internet

ದೇಶದಲ್ಲಿ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಕರ್ನಾಟಕದ ಒಟ್ಟು 243 ಕೇಂದ್ರಗಳಲ್ಲಿ  ಲಸಿಕೆ ನೀಡಲಾಗುತ್ತದೆ.  ಎರಡನೇ ಹಂತದಲ್ಲಿ ಪೊಲೀಸರು, ಅಗ್ನಿಶಾಮಕ ದಳ,  ಕಂದಾಯ ಇಲಾಖೆ ನೌಕರರು ಮತ್ತು ಇತರೆ ವಾರಿಯರ್ ಗಳಿಗೆ ಲಸಿಕೆ ನೀಡಲಾಗುತ್ತದೆ.

Key words: D Group -employee – received – first -covid vaccine – state.

website developers in mysore