‘ಬಿಗ್ ಬಿ’ ಅಮಿತಾಬ್​ ಬಚ್ಚನ್’ಗೆ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ

ನವದೆಹಲಿ, ಸೆಪ್ಟೆಂಬರ್ 25, 2019 (www.justkannada.in): ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿಗೆ ಅಮಿತಾಬ್​ ಬಚ್ಚನ್​ ಅವರನ್ನು ಆಯ್ಕೆ ಮಾಡಲಾಗಿದೆ.

ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಕೇಂದ್ರ ಸರ್ಕಾರದ ವತಿಯಿಂದ ನೀಡುವ ಪ್ರಶಸ್ತಿಗೆ ಈ ಬಾರಿ ಬಿಗ್ ಬಿ ಆಯ್ಕೆಯಾಗಿದ್ದಾರೆ.

ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿಯು ಸ್ವರ್ಣ ಕಮಲ ಪದಕ, ಶಾಲು ಹಾಗೂ 10 ಲಕ್ಷ ರೂ.ನಗದು ಬಹುಮಾನವನ್ನು ಒಳಗೊಂಡಿರುತ್ತದೆ. 1995ರಲ್ಲಿ ವರನಟ ಡಾ.ರಾಜಕುಮಾರ್ ಅವರಿಗೆ ಫಾಲ್ಕೆ ಪ್ರಶಸ್ತಿ ನೀಡಲಾಗಿತ್ತು.