ದಕ್ಷಿಣ ಕನ್ನಡ ಜಿಲ್ಲೆ ವಿಪತ್ತು ನಿರ್ವಹಣೆಗೆ ಹೆಚ್ಚುವರಿ 5 ಕೋಟಿ ಬಿಡುಗಡೆ- ಸಚಿವ ಆರ್.ಅಶೋಕ್…

Promotion

ಮಂಗಳೂರು,ಆ,8,2020(www.justkannada.in): ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ವಿಪತ್ತು ನಿರ್ವಹಣೆಗೆ ಹೆಚ್ಚುವರಿಯಾಗಿ 5 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.jk-logo-justkannada-logo

ಮಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆರ್.ಅಶೋಕ್, ನೆರೆ ಪೀಡಿತ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ. ಸಂತ್ರಸ್ಥರಿಗೆ ಪೌಷ್ಠಿಕ ಆಹಾರ ನೀಡಲು ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ವಿಪತ್ತು ನಿರ್ವಹಣೆಗೆ 5 ಕೋಟಿ ರೂ ಹೆಚ್ಚುವರಿಯಾಗಿ ನೀಡಲಾಗಿದೆ. ಜಿಲ್ಲೆಯ ವಿಪತ್ತು ನಿರ್ವಹಣೆ ಖಾತೆಯಲ್ಲಿ 23 ಕೋಟಿ ರೂ ಇದೆ ಎಂದು ಮಾಹಿತಿ ನೀಡಿದರು.Dakshina Kannada –district- releases -Rs 5 crore - disaster management- minister- R.ashok

ಇನ್ನು ನೆರೆ ಪೀಡಿತ ಪ್ರದೇಶಗಳಲ್ಲಿರುವ ಜನರನ್ನ ಒತ್ತಾಯಪೂರ್ವಕವಾಗಿ ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. ಸ್ಥಳಾಂತರಿಸಲು ವಿರೋಧಿಸಿದರೇ ಅಂತವರ ವಿರುದ್ದ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

Key words: Dakshina Kannada –district- releases -Rs 5 crore – disaster management- minister- R.ashok