ಮರಗಳಿಗೆ ಹಾನಿ ಮಾಡುವುದು ಶಿಕ್ಷಾರ್ಹ ಅಪರಾಧವಾಗಲಿದೆ : ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ 

kannada t-shirts

ಬೆಂಗಳೂರು,ಡಿಸೆಂಬರ್,10,2020(www.justkannada.in) : ಮರಗಳಿಗೆ ಹಾನಿ ಮಾಡುವ ಮೊಳೆ, ಸ್ಟ್ಯಾಪ್ಲರ್ ಪಿನ್ ಹೊಡೆಯುವುದು ಶಿಕ್ಷಾರ್ಹ ಅಪರಾಧ ಆಗಲಿದೆ. ಈ ಸಂಬಂಧ ಕಾನೂನಿಗೆ ತಿದ್ದುಪಡಿ ತಂದು ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಲು ಕ್ರಮವಹಿಸುವುದಾಗಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.logo-justkannada-mysoreಬುಧವಾರ ನಗರದ ಚಿತ್ರಕಲಾ ಪರಿಷತ್ತು ಬಸ್ ನಿಲ್ದಾಣ ಹತ್ತಿರ ಬಿ.ಪ್ಯಾಕ್ ಸಂಸ್ಥೆ ಹಮ್ಮಿಕೊಂಡಿರುವ ಮೊಳೆ ಮುಕ್ತ ಮರ ಬೆಂಗಳೂರು ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರಗಳ ಮೇಲೆ ಭಿತ್ತಿಪತ್ರಗಳು ಅಂಟಿಸುವುದು, ಮೊಳೆ ಹೊಡೆಯುವುದನ್ನು ನಿಷೇಧಿಸಿದ್ದರೂ ಮರಗಳ ಮೇಲೆ ಭಿತ್ತಿಪತ್ರಗಳನ್ನು ಅಂಟಿಸುತ್ತಿದ್ದಾರೆ. ಅಂತವರ ಮೇಲೆ ಕ್ರಿಮಿನಲ್ ಕೇಸ್ ಹಾಕಲು ಕ್ರಮಕೈಗೊಳ್ಳಲಾಗುತ್ತಿದೆ. ಜೊತೆಗೆ ಕಾನೂನು ತಿದ್ದುಪಡಿಗೆ ಕ್ರಮವಹಿಸಲಾಗುವುದು ಎಂದರು.

ಮೊರಕ್ಕೆ ಮೊಳೆ, ಕೇಬಲ್, ತಂತಿಗಳನ್ನು ಸುತ್ತಿದರೆ ಗಾಯವಾಗಿ ಸರಿಯಾಗಿ ಆಹಾರ, ನೀರು, ಪೌಷ್ಟಿಕಾಂಶ ಸಿಗದೆ ಮರಗಳು ಸಾವನ್ನಪ್ಪಲಿವೆ ಎಂದು ತಿಳಿಸಿದ್ದಾರೆ.

Damage,trees,punishable,offense,would,BBMP,Commissioner,N.Manjunath Prasad

key words : Damage-trees-punishable-offense-would-BBMP- Commissioner-N.Manjunath Prasad

website developers in mysore