ದಸರಾ ಉದ್ಘಾಟನೆ ರಾಷ್ಟ್ರಪತಿ ಭೇಟಿ ಹಿನ್ನೆಲೆ: ಚಾ.ಬೆಟ್ಟದಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಸೋಮಶೇಖರ್

mysore- minister- ST Somashekar-former CM-siddaramaiah
Promotion

ಬೆಂಗಳೂರು, ಸೆಪ್ಟೆಂಬರ್ 25, 2022 (www.justkannada.in): ದಸರಾ ಮಹೋತ್ಸವದ ಉದ್ಘಾಟನೆ ಹಾಗೂ ರಾಷ್ಟ್ರಪತಿಯವರ ಆಗಮನದ ಹಿನ್ನೆಲೆಯಲ್ಲಿ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಪೂರ್ವಸಿದ್ಧತೆ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಮೈಸೂರು ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಚಂದ್ರಗುಪ್ತ, ಅಪರ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ದಸರಾ ಸಿದ್ಧತೆ ಹಾಗೂ ಎಲ್ಲ ಕಾರ್ಯಕ್ರಮಗಳಿಗೆ ತಯಾರಿ ಪೂರ್ಣಗೊಂಡಿದೆ ಎಂದು ತಿಳಿಸಿದರು.