ಮೈಸೂರು ದಸರಾ ಮಹೋತ್ಸವ: ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯ.

Promotion

ಮೈಸೂರು,ಅಕ್ಟೋಬರ್,1,2021(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಮಭವಾಗಿದ್ದು, ಅಕ್ಟೋಬರ್ 7 ರಿಂದ ಖಾಸಗಿ ದರ್ಬಾರ್ ಆರಂಭ ಹಿನ್ನೆಲೆ ಅರಮನೆಯಲ್ಲಿ ಇಂದು ಸಿಂಹಾಸನ ಜೋಡಣಾ ಕಾರ್ಯ ನಡೆಯುತ್ತಿದೆ.

ಅರಮನೆಯ ದರ್ಬಾರ್ ಹಾಲ್ ನಲ್ಲಿ ಇಂದು ಬೆಳಿಗ್ಗೆಯ ಶುಭ ಅಭಿಜಿತ್ ಲಗ್ನದಲ್ಲಿ ಮೈಸೂರು ಗೆಜ್ಜಗಳ್ಳಿ ಗ್ರಾಮಸ್ಥರಿಂದ ಸಿಂಹಾಸನದ ಜೋಡಣೆ ಕಾರ್ಯ ನಡೆಯುತ್ತಿದೆ.  ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರು ಮಾರ್ಗದರ್ಶನದಲ್ಲಿ ಈ ಕಾರ್ಯ ನಡೆಯುತ್ತಿದ್ದು. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದವರೆಗೆ  ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಸಿಂಹಾಸನದ ಜೋಡಣೆ ಹಿನ್ನೆಲೆ ಇಂದು ಮುಂಜಾನೆಯಿಂದ ಹೋಮ ಹವನ  ನಡೆದಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ವಿಧಿವಿಧಾನ ನೆರವೇರಿಸಿದರು. ಅಕ್ಟೋಬರ್ 7 ರಿಂದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನವೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

Key words: Dasara Mahotsav –Mysore- Throne assemblage.-palace