ದೆಹಲಿ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್..

ನವದೆಹಲಿ,ಜ,6,2020(www.justkannada.in): ದೆಹಲಿ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್ ಆಗಿದ್ದು, ಫೆಬ್ರವರಿ 8 ರಂದು ಮತದಾನ ನಡೆಯಲಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ,  ಫೆಬ್ರವರಿ 9 ರಂದು ಮತದಾನ ನಡೆಯಲಿದ್ದು ಫೆಬ್ರವರಿ 11ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ. ಒಂದೇ ಹಂತದಲ್ಲಿ 70 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಜನವರಿ 14 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು ತಕ್ಷಣದಿಂದಲೇ ನೀತಿಸಂಹಿತೆ ಜಾರಿಗೆ ಬರಲಿದೆ. ಜನವರಿ 21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು ಜನವರಿ 22 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಇನ್ನು ಜ.24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ ಎಂದು ತಿಳಿಸಿದರು.

ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ 1.46 ಕೋಟಿ  ಮತದಾರರಿದ್ದು,  13,750 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗುವುದು. ದಿವ್ಯಾಂಗರಿಗೆ ಈ ಬಾರಿ ಅಂಚೆ ಮತದಾನ ಅವಕಾಶ ನೀಡಲಾಗಿದೆ. ಫೆಬ್ರವರಿ 22ಕ್ಕೆ ಆಪ್ ಸರ್ಕಾರದ ಅವಧಿ ಮುಕ್ತಾಯಗೊಳ್ಳಲಿದೆ ಎಂದು ಸುನೀಲ್ ಅರೋರಾ ತಿಳಿಸಿದರು.

Key words: Date fix – Delhi assembly- elections-central election commission