ಎಲ್ಲರ ಬೆಂಬಲ ಇದ್ರೆ ನಾನೇ ಡಿಸಿಎಂ ಆಗ್ತೇನೆ ಎಂದ ಶಾಸಕ ಎಂ.ಪಿ ರೇಣುಕಾಚಾರ್ಯ…

Promotion

ದಾವಣಗೆರೆ,ಜ,7,2020(www.justkannada.in): ರಾಜ್ಯದಲ್ಲಿ ಡಿಸಿಎಂ ಸ್ಥಾನದ ಅವಶ್ಯಕತೆ ಇಲ್ಲ ಎಂದು ಹೇಳಿದ್ದ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀಗ ಡಿಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಹೌದು ದಾವಣಗೆರೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ, ಎಲ್ಲರ ಬೆಂಬಲ ಇದ್ದರೇ ನಾನೇ ಡಿಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಎಂ.ಪಿ ರೇಣುಕಾಚಾರ್ಯ, ಸಚಿವ ಸಂಪುಟ ವಿಸ್ತರಣೆ ವೇಳೆ ದಾವಣಗೆರೆಗೂ ಇಂದು ಸ್ಥಾನ ನೀಡುವಂತೆ ಕೇಳಿದ್ದೇನೆ. ಮಧ್ಯ ಕರ್ನಾಟಕಕ್ಕೆ ಒಂದು ಸ್ಥಾನ ನೀಡಿ ಎಂದು ಮನವಿ ಮಾಡಿದ್ದೇನೆ. ಯಾರೇ ಸಚಿವರಾದ್ರೂ ನಮಗೆ ಸಂತಸ. ಇನ್ನು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಜತೆ ಮಾತನಾಡಿದ್ದೇನೆ ಎಂದು ತಿಳಿಸಿದರು.

Key words: davanagere- BJP MLA- MP Renukacharya-DCM -supportive.