ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಗಳ ಸ್ಥಗಿತಕ್ಕೆ ಡಿಸಿ ಆದೇಶ…

ದಾವಣಗೆರೆ,ನವೆಂಬರ್,5,2020(www.justkannada.in):  ದಾವಣಗೆರೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿರುವ ಹಿನ್ನೆಲೆ ಕೋವಿಡ್ ಕೇರ್ ಸೆಂಟರ್ ಗಳ ಸ್ಥಗಿತಕ್ಕೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.jk-logo-justkannada-logo

ಕೋವಿಡ್ ಸೋಂಕಿ ತುತ್ತಾದ ರೋಗಿಗಳಿಗೆ ವೈದ್ಯಕೀಯ ನೆರವು ನೀಡುವ ಸಲುವಾಗಿ ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿತ್ತು. ಇದೀಗ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆ ದಾವಣಗೆರೆ ಸೇರಿ 6 ಕಡೆ ತೆರೆಯಲಾಗಿದ್ದ ಕೋವಿಡ್ ಕೇರ್ ಸೆಂಟರ್ ಸ್ಥಗಿತಗೊಳಿಸಲು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚಿಸಿದ್ದಾರೆ ಎನ್ನಲಾಗಿದೆ.davanagere-district-dc-orders-close-covid-care-centers

ಕೊರೋನಾ ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲು ಡಿಸಿ ಮಹಂತೇಶ್ ಬೀಳಗಿ ಆದೇಶಿಸಿದ್ದಾರೆ. ಮುಂದಿನ ಚಳಿಗಾಲದ ದಿನಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುವ ಸುಳಿವಿದ್ದು ತಕ್ಷಣಕ್ಕೆ ಕೈಗೊಳ್ಳಬೇಕಾದ ಎಲ್ಲಾ ಸಿದ್ದತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ಹಾಗಾಗಿ ಮತ್ತೆ ಅಗತ್ಯ ಬಿದ್ದರೆ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು ಎಂದು ಡಿಸಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

Key words: Davanagere district -DC- orders –close- covid care centers