ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ ವನಿತೆಯರಿಗೆ ಹಗಲು-ರಾತ್ರಿ ಟೆಸ್ಟ್ ಪಂದ್ಯ

Promotion

ಬೆಂಗಳೂರು, ಮೇ 20, 2021 (www.justkannada.in): ಟೀಂ ಇಂಡಿಯಾ ವನಿತೆಯರಿಗೆ ಚೊಚ್ಚಲ ಬಾರಿಗೆ ಹಗಲು-ರಾತ್ರಿಪಿಂಕ್​ ಬಾಲ್​ ಕ್ರಿಕೆಟ್ ಪಂದ್ಯ ಆಯೋಜಿಸಲಾಗುತ್ತಿದೆ.

ಆಸ್ಟ್ರೇಲಿಯಾ ತಂಡದ ವಿರುದ್ಧ ಮೊದಲ ಬಾರಿಗೆ ಹಗಲು-ರಾತ್ರಿ ಪಿಂಕ್​ ಬಾಲ್ ಟೆಸ್ಟ್​​ ಕ್ರಿಕೆಟ್ ಆಡಲಿದ್ದಾರೆ.

ಈ ವರ್ಷಾಂತ್ಯದಲ್ಲಿ ಭಾರತ ಕ್ರಿಕೆಟ್ ತಂಡದ ವನಿತೆಯರು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಹಗಲು ರಾತ್ರಿ ಟೆಸ್ಟ್ ಪಂದ್ಯ ಏರ್ಪಡಿಸಲಾಗಿದೆ.

ಬಿಸಿಸಿಐ ಕಾರ್ಯದರ್ಶಿ ಜಯ್​ ಷಾ​ ಈ ಕುರಿತು ಟ್ವಿಟ್ ಮಾಡಿ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಭಾರತೀಯ ಮಹಿಳಾ ಕ್ರಿಕೆಟಿಗರಿಗೆ ಉತ್ತೇಜನ ನೀಡಲು ಎಂದು ಜಯ್​ ಷಾ ಟ್ವೀಟ್​ನಲ್ಲಿ ತಿಳಿಸಿದ್ದಾರೆ.