ನಟ ಸಂಚಾರಿ ವಿಜಯ್‌ ಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಮುಂದೆ ಬಂದ ಡಿಸಿಎಂ ಅಶ್ವಥ್ ನಾರಾಯಣ್.

Promotion

ಬೆಂಗಳೂರು,ಜೂನ್,14,2021(www.justkannada.in): ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರ ಪ್ರಶಸ್ತಿ ವಿಜೇತ ಕನ್ನಡ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ್ ಮುಂದೆ ಬಂದಿದ್ದಾರೆ.jk

ಇಂದು ಬೆಳಗ್ಗೆ ವಿಜಯ್‌ ಅವರು ಚಿಕಿತ್ಸೆ ಪಡೆಯುತ್ತಿರುವ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್‌ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ ಅಶ್ವಥ್ ನಾರಾಯಣ್, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್‌ ಭರಿಸುತ್ತದೆ ಎಂದು ಭರವಸೆ ನೀಡಿದರು.

ವಿಜಯ್‌ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

Key words: DCM -Ashwath Narayan- actor-sanchari vijay- full -cost -treatment.